IIT Dharwad Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹಿರಿಯ ಸಂಶೋಧನಾ ಫೆಲೋ (SRF) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯ ಪೋಸ್ಟಿಂಗ್ ಧಾರವಾಡ – ಕರ್ನಾಟಕದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 30-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 30-05-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಹುದ್ದೆ ಹೆಸರು ಮತ್ತು ಸಂಖ್ಯೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT ಧಾರವಾಡ) ಇಲ್ಲಿ ಸೀನಿಯರ್ ರಿಸರ್ಚ್ ಫೆಲೋ (ಎಸ್‌ಆರ್‌ಎಫ್) ಒಂದು ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.42,000 ವೇತನ ಸಿಗಲಿದೆ. ಧಾರವಾಡದಲ್ಲಿ ಈ ಹುದ್ದೆಗೆ ಆಯ್ಕೆಯಾದವರಿಗೆ ಪೋಸ್ಟಿಂಗ್ ಆಗಲಿದೆ.
ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ತೆರ್ಗಡೆ ಹೊಂದಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಎರಡು ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿದ್ದರೆ ಉತ್ತಮ.
ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಎಸ್‌ಆರ್‌ಎಫ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 35 ವರ್ಷ ಮೀರಿರಬಾರದು.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ