ಭಾರತ ಸರಕಾರದ ಅಧೀನದ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಹರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ವಿವರ : ಇನ್ ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಟ್ಯಾಕ್ಸ್ ಅಸಿಸ್ಟೆಂಟ್ ( tax assistant) – 11, ಸ್ಟೆನೋಗ್ರಾಫರ್ ಗ್ರೇಡ್ – 2- 5, ಮಲ್ಟಿ ಟಾಸ್ಕಿಂಗ್ ಸ್ಟಾಫ್- 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ವಿದ್ಯಾರ್ಹತೆ : ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಪದವಿ ಪಾಸ್ ಮಾಡಿರಬೇಕು. ಸ್ಟೆನೋಗ್ರಾಫರ್ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಮಾಡಿರಬೇಕು. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಎಸ್ ಎಸ್ ಎಲ್ ಸಿ / 10 ನೇ ತರಗತಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಯನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳಾದ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಕಾಪಿಗೆ ಸೇತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ : ಡೆಪ್ಯೂಟಿ ಕಮಿಷನರ್, ಆದಾಯ ತೆರಿಗೆ ಇಲಾಖೆ, 3 ನೇ ಮಹಡಿ, ರೂಮ್ ನಂಬರಗ 388A, ಸೆಂಟ್ರಲ್ ರೆವಿನ್ಯೂ ಬಿಲ್ಡಿಂಗ್, ಐ ಪಿ ಎಸ್ಟೇಟ್, ನವದೆಹಲಿ – 110002
ಈ ಮೇಲಿನ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ರ ವರೆಗೆ ಅವಕಾಶ ಇದೆ.
ಜಮ್ಮು ಕಾಶ್ಮೀರ, ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ಅಭ್ಯರ್ಥಿಗಳು ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ