ಆದಾಯ ತೆರಿಗೆ ಮುಖ್ಯ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ.
ಹುದ್ದೆ : ಇನ್ಕಂಟ್ಯಾಕ್ಸ್ ಇನ್ಸ್ ಪೆಕ್ಟರ್- 01
ಟ್ಯಾಕ್ಸ್ ಅಸಿಸ್ಟೆಂಟ್ – 4
ಸ್ಟೆನೋಗ್ರಾಫರ್ ಗ್ರೇಡ್ 2 – 3
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 06
ವಯೋಮಿತಿ : ಎಲ್ಲಾ ಹುದ್ದೆಗಳಿಗೆ ಕನಿಷ್ಠ 18 ವರ್ಷ. ಇನ್ಕಂಟ್ಯಾಕ್ಸ್ ಹುದ್ದೆಗೆ ಗರಿಷ್ಠ 30 ವರ್ಷ, ಉಳಿದ ಹುದ್ದೆಗಳಿಗೆ ಗರಿಷ್ಠ 27 ವರ್ಷ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವಿದ್ಯಾರ್ಹತೆ : SSLC , ಪಿಯುಸಿ, ದ್ವಿತೀಯ ಪಿಯುಸಿ ಪಡೆದಿರಬೇಕು. ಟ್ಯಾಕ್ಸ್ ಅಸಿಸ್ಟೆಂಟ್ ಗೆ ಪ್ರತಿ ಗಂಟೆಗೆ 8000 ಪದಗಳ ಡೇಟಾ ಎಂಟ್ರಿಗಳ ವೇಗ ಹೊಂದಿರಬೇಕು. ಸ್ಟೆನೋಗ್ರಾಫರ್ ಗೆ ಡಿಕ್ಟೇಷನ್ ಪ್ರತಿ ನಿಮಿಷಕ್ಕೆ 80 ಪದಗಳ ವೇಗ ಹೊಂದಿರಬೇಕು. ಪ್ರತಿ ನಿಮಿಷಕ್ಕೆ ಇಂಗ್ಲೀಷ್ ನಲ್ಲಿ 50 ಪದ, 65 ಹಿಂದಿ ಪದಗಳ ಪ್ರತಿಲೇಖನ ಕೌಶಲ ಹೊಂದಿರಬೇಕು.
ಹುದ್ದೆ ಸ್ಥಳ : ದೆಹಲಿಯ ಮುಖ್ಯ ಆಯುಕ್ತರ ಕಛೇರಿ.
ಎರಡು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅರ್ಹ ಆಸಕ್ತ ಅಭ್ಯರ್ಥಿಗಳು ದಿನಾಂಕ 15-04-2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ವೇತನ : ಇನ್ಕಂಟ್ಯಾಕ್ಸ್ ಆಫೀಸರ್ ಗೆ ಮಾಸಿಕ ರೂ.34,800/- , ಹಾಗೂ ಉಳಿದ ಹುದ್ದೆಗಳಿಗೆ ಮಾಸಿಕ ರೂ.20,200/- ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ : ಶಾರ್ಟ್ ಲಿಸ್ಟ್ ಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ದಿನಾಂಕ, ಸ್ಥಳ, ಸಮಯ ಇತ್ಯಾದಿಗಳನ್ನು ಶಾರ್ಟ್ ಲಿಸ್ಟ್ ಗೆ ಆಯ್ಕೆಯಾದ ಅಭ್ಯರ್ಥಿಗಳ ಮೇಲ್ ಗೆ ಕಳುಹಿಸಲಾಗುವುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯನ್ನು ಯಾವ ಹುದ್ದೆಗೆ ಅರ್ಜಿ ಸಲ್ಲಿಸುವುದು ಹಾಗೂ ಕ್ರೀಡಾ ವಿಭಾಗದಲ್ಲಿ ಯಾವ ಕ್ರೀಡೆ ಎಂಬುದನ್ನು ಸ್ಪಷ್ಟವಾಗಿ ಬರೆಯ ಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಈ ವಿಳಾಸಕ್ಕೆ ಸಲ್ಲಿಸಬೇಕು.
The Deputy Commissioner Of Income Tax (Hqrs- Personnel), Room No.378A, C.R.Building, I.P.Estate, New Delhi – 110002
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ