ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್) ನಲ್ಲಿ ಖಾಲಿ ಇರುವ 257 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 26 ಫೆಬ್ರವರಿ 2021 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 26 ಮಾರ್ಚ್ 2021 ಕೊನೆಯ ದಿನಾಂಕವಾಗಿರುತ್ತದೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೆಯೇ ಗರಿಷ್ಠ 25 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ ಈ ಕೆಳಗಿನಂತಿವೆ :
ಮಲ್ಟಿ ಟಾಸ್ಕಿಂಗ್ ಸ್ಟಾಫ್ -70
ಹೌಸ್ ಕೀಪಿಂಗ್ ಸ್ಟಾಫ್ – 43
ಮೆಸ್ ಸ್ಟಾಫ್ – 49
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಲೋವರ್ ಡಿವಿಶನ್ ಕ್ಲರ್ಕ್ -12
ಕ್ಲರ್ಕ್ ಹಿಂದಿ ಟೈಪಿಸ್ಟ್ -02
ಸ್ಟೆನೋಗ್ರಾಫರ್ ಗ್ರೇಡ್ (02)-03
ಈ ಹುದ್ದೆಗಳಿಗೆ 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರೋ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸ್ಟೋರ್ ಸೂಪರಿಂಟೆಂಡೆಂಟ್ -03 ಹುದ್ದೆಗಳಿಗೆ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಸ್ಟೋರ್ ಕೀಪರ್ -03 ಹುದ್ದೆಗಳಿಗೆ 12 ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಲಾಂಡ್ರಿ ಮ್ಯಾನ್ – 07 ಹುದ್ದೆಗಳಿದ್ದು ಇದಕ್ಕೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕಾರ್ಪೆಂಟರ್ – 02 ಪೈಂಟರ್ -04 . ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಜೊತೆಗೆ ಐಟಿಐ ಸರ್ಟಿಫಿಕೇಟ್ ನ್ನು ಕೇಳಿದ್ದಾರೆ.
ಸಿವಿಲಿಯನ್ ಮೆಕ್ಯಾನಿಕ್ ಟ್ರಾನ್ಸ್‌ಪೋರ್ಟ್ ಡ್ರೈವರ್ -09
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾಗಿದ್ದು, ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಕುಕ್ (ಆರ್ಡಿನರಿ ಗ್ರೇಡ್) -41 ಹುದ್ದೆಗಳು ಇದ್ದು ಮೆಟ್ರಿಕ್ಯುಲೇಶನ್ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಜೊತೆಗೆ ಸಂಬಂಧಪಟ್ಟ ಹುದ್ದೆಯಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕೊನೆಯದಾಗಿ ಫಯರ್ ಮ್ಯಾನ್ – 08 ಹುದ್ದೆಗಳಿದ್ದು ಅಭ್ಯರ್ಥಿಗಳು ಮೆಟ್ರಿಕ್ಯುಲೇಶನ್ ಪಾಸಾಗಿರಬೇಕು ಹಾಗೂ ಸಂಬಂಧ ಪಟ್ಡ ಟ್ರೇಡ್ ನಲ್ಲಿ ಅನುಭವ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ: ಮೇಲೆ ಹೇಳಿರುವ ಎಲ್ಲಾ
ಹುದ್ದೆಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಫ್ ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಸೇನೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.