ಕರಾವಳಿ ಪಡೆಯಲ್ಲಿ ವಿವಿಧ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಭಾರತೀಯ ಕರಾವಳಿ ಪಡೆ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಭಾರತೀಯ ಕಾವಲು ಪಡೆಯಲ್ಲಿ ಎನ್ರೋಲ್ಡ್ ಫಾಲವರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಹುದ್ದೆ ಸ್ಥಳ : ಆಲ್ ಇಂಡಿಯಾ

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನ 21,700/- ರಿಂದ ರೂ.69,100/- ನಿಗದಿಪಡಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ 5

ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ಯುನಿವರ್ಸಿಟಿಯಿಂದ 10th, ಐಟಿಐ ಪಾಸಾಗಿರಬೇಕು.

ವಯೋಮಿತಿ :ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಉಳ್ಳವರಾಗಿರಬೇಕು.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 15-04-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

ವಿಳಾಸ:

The President, (EF Recruitment Board), Indian Coast Guard Air Station, Airport Road, Nani Daman, Daman-396210

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
https://joinindiancoastguard.gov.in/

Leave a Comment