Indian Navy 2021 : ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

Advertisements

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು 2021 ಬಿಡುಗಡೆ ಮಾಡಿದೆ. ಕ್ರೀಡಾ ಕೋಟಾ ಪ್ರವೇಶ 2022 ರ ಬ್ಯಾಚ್ ನ ಹಲವಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಕ್ರೀಡಾಪಟುಗಳಿಂದ( ಅವಿವಾಹಿತ ಪುರುಷ? ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಪ್ರಿಲ್ 2022 ರಲ್ಲಿ ಪ್ರಾರಂಭವಾಗುವ ಕೋರ್ಸ್ ನ್ನು ಭಾರತದಲ್ಲಿನ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿ.11, 2021

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿ.25, 2021

ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು 10+2 ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಭಾರತೀಯ ನೌಕಾಪಡೆ ನೇಮಕಾತಿ ನಾವಿಕ ಹುದ್ದೆಗಳಿಗೆ ಕನಿಷ್ಠ 17 ರಿಂದ ಗರಿಷ್ಠ 21 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 43,100/- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಭಾರತೀಯ ನೌಕಾಪಡೆ ನೇಮಕಾತಿ ನಾವಿಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಡಿ.25, 2021 ರೊಳಗೆ ತಲುಪಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ.

Leave a Comment