ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಎಪ್ರಿಲ್ 26 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 30,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಹುದ್ದೆ: ಸೈಲರ್ (Sailor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 2500
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,600/- ವೇತನ ನಿಗದಿಪಡಿಸಲಾಗಿದೆ.
ಹುದ್ದೆ ಸ್ಥಳ: ಭಾರತದೆಲ್ಲೆಡೆ
ಭಾರತೀಯ ನೌಕಾಪಡೆಯಲ್ಲಿ ಸೈಲರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ ಯಿಂದ 12th ಪಾಸಾಗಿರಬೇಕು. 10+2 ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಗಣಿತ ಹಾಗೂ ಭೌತಶಾಸ್ತ್ರ ಒಂದು ವಿಷಯವಾಗಿ ಓದಿರಬೇಕು. ರಸಾಯನಶಾಸ್ತ್ರ, ಜೀವಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಕಲಿಕೆ ವಿಷಯದಲ್ಲಿರಬೇಕು.
ವಯೋಮಿತಿ : ಭಾರತೀಯ ನೌಕಾಪಡೆಯ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಭರ್ತಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಆನ್ಲೈನ್ ಮೂಲಕ ದಿನಾಂಕ 30-04-2021 ರೊಳಗೆ ಸಲ್ಲಿಸಬೇಕು.
ಅಧಿಕೃತ ವೆಬ್‌ಸೈಟ್ ಈ ಲಿಂಕ್ ಕ್ಲಿಕ್ ಮಾಡಿ
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ