ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) ನಲ್ಲಿ 346 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ವಿವಿಧ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಹಾಕಬಹುದು.

ಹುದ್ದೆ : ಟೆಕ್ನಿಶಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್

ಹುದ್ದೆಯ ಸಂಖ್ಯೆ: 346

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-03-2021

ಲಿಖಿತ ಪರೀಕ್ಷೆ : 21-03-2021

ವಯೋಮಿತಿ :
ಅರ್ಜಿ ಸಲ್ಲಿಸುವ ಇಡ್ಬ್ಯುಎಸ್ /ಜನರಲ್ ಅಭ್ಯರ್ಥಿಗಳಿಗೆ 28.02.2021 ರ ಅನ್ವಯದಂತೆ ಕನಿಷ್ಠ 18 ಹಾಗೂ ಗರಿಷ್ಠ 24 ವಯಸ್ಸಾಗಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಒಬಿಸಿ/ಪಿಡ್ಬ್ಯುಬಿಡಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಂಸ್ಥೆಯ ರೂಲ್ಸ್ ಪ್ರಕಾರ ನೀಡಲಾಗಿದೆ.

ವಿದ್ಯಾರ್ಹತೆ
ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಇಂಜಿನಿಯರಿಂಗ್ ಇನ್ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್/ಸಿವಿಲ್/ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ /ಐಟಿಐ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ 50% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ www.iocl.com ಗರ ಭೇಟಿ ನೀಡಿ.

Leave a Comment