ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ : 300 ತಾಂತ್ರಿಕ ಹುದ್ದೆ.
ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ 5 ಗಂಟೆಯೊಳಗೆ
ಖಾಲಿ ಹುದ್ದೆಗಳ ವಿವರ :
ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು
ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳು
ಒಟ್ಟು ಹುದ್ದೆಗಳು – 300 ಹುದ್ದೆಗಳು
ವಿದ್ಯಾರ್ಹತೆ : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10 ನೇ ತರಗತಿ/ ಮೆಟ್ರಿಕ್ಯುಲೇಷನ್ ಅಥವಾ ಐಟಿಐ ವಿದ್ಯಾರ್ಹತೆ, 12 ನೇ ತರಗತಿ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿಯ ಗರಿಷ್ಠ 27 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಗರಿಷ್ಠ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ