ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಕೋರ್ಪರೇಶನ್ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಲ್ಲಿಸಲು 20 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಐಆರ್ ಸಿಟಿಸಿ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ-1 ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ : ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ.50,000/- ರಿಂದ 1,60,000/- ವರೆಗೆ ವೇತನ ನಿಗದಿಪಡಿಸಲಾಗಿದೆ.
ಹುದ್ದೆ ಸ್ಥಳ : ಡೆಲ್ಲಿ
ವಿದ್ಯಾರ್ಹತೆ :ಐಆರ್ ಸಿಟಿಸಿ ನ ನಿಯಮಾನುಸಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಬೋರ್ಡ್ ನಿಂದ ಗ್ರಾಜ್ಯುಯೇಟ್/ ಎಲ್.ಎಲ್.ಬಿ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 50 ವರ್ಷ ಮೀರಿರಬಾರದು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ : General Manager (HRD), Indian Railway Catering and Tourism Corporation Ltd., 12th Floor, Statesman House, Barakhamba Road, New Delhi- 110001
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ