ISRO NRSC Recruitment 2024: ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ISRO NRSC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 71 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಶೋಧನಾ ವಿಜ್ಞಾನಿ, JRF ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಹೈದರಾಬಾದ್, ನಾಗ್ಪುರ, ಕೋಲ್ಕತ್ತಾ, ಬೆಂಗಳೂರು ಸರ್ಕಾರದಲ್ಲಿ ಪೋಸ್ಟಿಂಗ್ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-Apr-2024 ಆಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 18-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2024
ಹುದ್ದೆಗಳ ವಿವರ ಇಲ್ಲಿದೆ;
ಹುದ್ದೆ ಹೆಸರು ಮತ್ತು ಸಂಖ್ಯೆ ಮತ್ತು ವಯೋಮಿತಿ;
ಸಂಶೋಧನಾ ವಿಜ್ಞಾನಿ 20 ಹುದ್ದೆಗಳು- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು.
ಪ್ರಾಜೆಕ್ಟ್ ಸೈಂಟಿಸ್ಟ್-I 6 ಹುದ್ದೆಗಳು – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು.
ಪ್ರಾಜೆಕ್ಟ್ ಸೈಂಟಿಸ್ಟ್-ಬಿ 4 ಹುದ್ದೆಗಳು – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 35 ವರ್ಷ ಮೀರಿರಬಾರದು.
ಪ್ರಾಜೆಕ್ಟ್ ಅಸೋಸಿಯೇಟ್-I 2 ಹುದ್ದೆಗಳು – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 35 ವರ್ಷ ಮೀರಿರಬಾರದು.
ಪ್ರಾಜೆಕ್ಟ್ ಅಸೋಸಿಯೇಟ್-II 12 ಹುದ್ದೆಗಳು- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 35 ವರ್ಷ ಮೀರಿರಬಾರದು.
ಜೂನಿಯರ್ ರಿಸರ್ಚ್ ಫೆಲೋ (JRF) 27 ಹುದ್ದೆಗಳು -ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 28 ವರ್ಷ ಮೀರಿರಬಾರದು.
ಒಟ್ಟು 71 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಿತಿ ಸಡಿಲಿಕೆ: ಒಬಿಡಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಶೈಕ್ಷಣಿಕ ಅರ್ಹತೆ:
ಸಂಶೋಧನಾ ವಿಜ್ಞಾನಿ: B.Sc, B.E ಅಥವಾ B.Tech in CSE/Civil Engineering/Agricultural Engineering, M.Sc, M.E ಅಥವಾ M.Tech ಮಾಡಿರಬೇಕು.
ಪ್ರಾಜೆಕ್ಟ್ ಸೈಂಟಿಸ್ಟ್-I: CSE, M.E ಅಥವಾ M.Tech ನಲ್ಲಿ B.E ಅಥವಾ B.Tech ತೇರ್ಗಡೆ ಹೊಂದಿರಬೇಕು.
ಪ್ರಾಜೆಕ್ಟ್ ಸೈಂಟಿಸ್ಟ್-ಬಿ: ಸಿಎಸ್‌ಇಯಲ್ಲಿ ಬಿ.ಇ ಅಥವಾ ಬಿ.ಟೆಕ್ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ಪ್ರಾಜೆಕ್ಟ್ ಅಸೋಸಿಯೇಟ್-I: B.Sc, M.Sc ಹೊಂದಿರಬೇಕು.
ಪ್ರಾಜೆಕ್ಟ್ ಅಸೋಸಿಯೇಟ್-II: CSE, M.E ಅಥವಾ M.Tech ನಲ್ಲಿ B.E ಅಥವಾ B.Tech ಮಾಡಿರುವವರಿಗೆ ಆದ್ಯತೆ ನೀಡಲಾಗುವುದು.
ಜೂನಿಯರ್ ರಿಸರ್ಚ್ ಫೆಲೋ (JRF): B.Sc, M.Sc, B.E ಅಥವಾ B.Tech, M.E ಅಥವಾ M.Tech ತೇರ್ಗಡೆ ಹೊಂದಿರಬೇಕು.
ವೇತನ: ಸಂಶೋಧನಾ ವಿಜ್ಞಾನಿ – ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ವೇತನವಿರಲಿದೆ.
ಪ್ರಾಜೆಕ್ಟ್ ಸೈಂಟಿಸ್ಟ್-I – ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ವೇತನವಿರಲಿದೆ.
ಪ್ರಾಜೆಕ್ಟ್ ಸೈಂಟಿಸ್ಟ್-ಬಿ – ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ವೇತನವಿರಲಿದೆ.
ಪ್ರಾಜೆಕ್ಟ್ ಅಸೋಸಿಯೇಟ್-I – ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31,000/- ವೇತನವಿರಲಿದೆ.
ಪ್ರಾಜೆಕ್ಟ್ ಅಸೋಸಿಯೇಟ್-II – ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,000/- ವೇತನವಿರಲಿದೆ.
ಜೂನಿಯರ್ ರಿಸರ್ಚ್ ಫೆಲೋ (JRF) -ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,000/-ರೂ.42,000 ವೇತನವಿರಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ