ITI Ltd Recruitment 2024: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ಐಟಿಐ ಲಿಮಿಟೆಡ್ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 06 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವೆಚ್ಚ ಮತ್ತು ನಿರ್ವಹಣಾ ಅಕೌಂಟೆಂಟ್ ಟ್ರೈನಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಇಲ್ಲಿ ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು 29-ಮೇ-2024 10:00 AM ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹದು.
ಪ್ರಮುಖ ದಿನಾಂಕಗಳು;
ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 21-05-2024
ನೇರ ಸಂದರ್ಶನದ ದಿನಾಂಕ: 29-ಮೇ-2024 10:00 AM
ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ಇಲ್ಲಿ ಖಾಲಿ ಇರುವ 6 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರು -ಕರ್ನಾಟಕದಲ್ಲಿ ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತರು ವೆಚ್ಚ ಮತ್ತು ನಿರ್ವಹಣೆ ಅಕೌಂಟೆಂಟ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್ ರೂ.10000-12500/- ಪ್ರತಿ ತಿಂಗಳು ಸಿಗಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ CMA ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳನ್ನು ಮೀರಿರಬಾರದು. ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಮೇಲೆ ತಿಳಿಸಿದ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ? ಕರ್ನಾಟಕದಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳ ಜೊತೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ನೇರ ಸಂದರ್ಶನದ ವಿಳಾಸ: ITI Limited, Regd. and Corporate Office, ITI Bhavan, Dooravani Nagar, Bangalore ಇಲ್ಲಿ 29-ಮೇ-2024 ರಂದು 10:00 AM ಗೆ ಅಭ್ಯರ್ಥಿಗಳು ಹಾಜರಿರಬೇಕು.
ಮಹತ್ವದ ಸೂಚನೆ: ಅಭ್ಯರ್ಥಿಗಳು ಇಮೇಲ್ ಮೂಲಕ ಆಯ್ಕೆಯ ದಿನದಂದು ಈ ಕೆಳಗಿನ ಸ್ಥಳದಲ್ಲಿ ಹಾಜರಿರಲು ಮೊದಲೇ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಈ ಇಮೇಲ್ ವಿಳಾಸಕ್ಕೆ ಸಂಪರ್ಕಿಸಬಹುದು: [email protected]