Advertisements
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಫೆಬ್ರವರಿಯಲ್ಲಿ ನಡೆಸುವ ಜೆಇಇ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಬಹುದು.
ಜೆಇಇ ಪರೀಕ್ಷೆಯು ಫೆ.23 ರಿಂದ ಫೆ.26, 2021 ರ ವರೆಗೆ ನಡೆಯಲಿದ್ದು, ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ ಈ ಕೆಳಗಿನಂತಿವೆ :
1 : ಜೆಇಇ ಅಧಿಕೃತ ವೆಬ್ ಸೈಟ್ https://jeemain.nta.nic.in/webinfo/Public/View.aspx?page=1 ಭೇಟಿ ನೀಡಿ.
2. ಹೋಂ ಪೇಜ್ ನಲ್ಲಿ ಲಭ್ಯವಿರುವ “Download Admit Card of JEE (Main)February 2021” ಬಟನ್ ಮೇಲೆ ಕ್ಲಿಕ್ ಮಾಡಿ.
3 : ಅಲ್ಲಿ ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ.
4 : “submit” ಬಟನ್ ಮೇಲೆ ಕ್ಲಿಕ್ ಮಾಡಿ.
5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನ ಡೌನ್ ಲೋಡ್ ಮಾಡಿ, ಪ್ರಿಂಟ್ ತೆಗೆದಿಟ್ಟುಕೊಳ್ಳಿ.