ಕಲಬುರಗಿ ಜಿಲ್ಲಾ ಪಂಚಾಯತಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : ಬಿ.ಎಫ್.ಟಿ (bare foot technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 30
ಅರ್ಜಿಗಳನ್ನು ಸಲ್ಲಿಸುವವರು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ
ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿಂದಿನ 3 ವರ್ಷಗಳಲ್ಲಿ ಕನಿಷ್ಠ ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರನಾಗಿ ಕೆಲಸವನ್ನು ಮಾಡಿರಬೇಕು.
ವಿದ್ಯಾರ್ಹತೆ: ಕನಿಷ್ಠ 10 ನೇ ತರಗತಿ ತೇರ್ಗಡೆ ಹೊಂದಿರಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 12,000/- ನೀಡಲಾಗುತ್ತದೆ.
ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುತ್ತದೆ.
ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 45 ವಯಸ್ಸಾಗಿರಬೇಕು.
ಬಿಎಫ್ ಟಿ ಗಳನ್ನು ಕುಶಲ ಕಾರ್ಮಿಕರೆಂದು(skilled laboures ) ಪರಿಗಣಿಸಿ ಕರ್ತವ್ಯ ಕ್ಕೆ ನಿಯೋಜಿಸಿಕೊಳ್ಳಲಾಗುತ್ತದೆ. ಖಾಯಂ ಹುದ್ದೆ ಆಗಿರುವುದಿಲ್ಲ.
ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅವಶ್ಯ ದಾಖಲಾತಿಗಳೊಂದಿಗೆ ಮಾರ್ಚ್ 30 ರೊಳಗಾಗಿ( ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ) ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 9482046044, 9480866010