Advertisements
ಕಲಬುರಗಿ ಜಿಲ್ಲೆಯ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :
ಹುದ್ದೆ : ಪೌರಕಾರ್ಮಿಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.
ಕ್ಷೇಮಾಭಿವೃದ್ಧಿ/ಗುತ್ತಿಗೆ/ಹೊರಗುತ್ತಿಗೆ/ದಿನಗೂಲಿ/ಸಮಾನ ಕೆಲಸ ಕ್ಕೆ ಸಮಾನ ವೇತನ/ಇತರೆ ಆಧಾರದ ಮೇಲೆ ಕರ್ತವ್ಯ ನಿರತರಿಗೆ ಆದ್ಯತೆ ನೀಡಿ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021 ( ಸಾಯಂಕಾಲ 5 ಗಂಟೆಯವರೆಗೆ)
ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಜಿಲ್ಲಾಧಿಕಾರಿಗಳ ಕಚೇರಿ ಕಲಬುರಗಿ ಅಥವಾ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಕಚೇರಿಯಿಂದ ಪಡೆದುಕೊಳ್ಳತಕ್ಕದ್ದು. .
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಹಾನಗರ ಪಾಲಿಕೆ ಕಲಬುರಗಿ ಕಾರ್ಯಾಲಯದಿಂದ ಅಥವಾ ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.