ಕೆಎಪಿಎಲ್ ನಲ್ಲಿ ಉದ್ಯೋಗವಕಾಶ

Advertisements

ಕರ್ನಾಟಕ ಆಂಟಿಯೋಟಿಕ್ಸ್ ಆಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ( ಕೆಎಪಿಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್‌ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 15, 2021

ಒಟ್ಟು ಹುದ್ದೆ : 25

ಹುದ್ದೆ : ಫ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ , ಏರಿಯಾ ಮ್ಯಾನೇಜರ್, ಏರಿಯಾ ಸೇಲ್ಸ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಸ್ಥಳ : ಭಾರತದೆಲ್ಲೆಡೆ

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಬಿಎಸ್‌ಸಿ ಯಲ್ಲಿ ವಿಜ್ಞಾನ, ಕಾಮರ್ಸ್‌ ಅಥವಾ ಕಲೆ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ : ಫ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷ, ಏರಿಯಾ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷ, ಏರಿಯಾ ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷ ಆಗಿರಬೇಕು.

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಲು ಈ ಲಿಂಕ್ ಕ್ಲಿಕ್ ಮಾಡಿ

Leave a Comment