Karnataka Apex Bank Recruitment 2024: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 93 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2024
ಹುದ್ದೆಗಳ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ 93. ನೇಮಕಾತಿ ಸಂದರ್ಭದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ /ಕಡಿಮೆ ಮಾಡುವ ಅಧಿಕಾರ ಬ್ಯಾಂಕ್‌ಗೆ ಇದೆ.
ವೇತನ: ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.28,425 ರಿಂದ ರೂ.87,125 ಶ್ರೇಣಿಯಲ್ಲಿ ಮಾಸಿಕ ವೇತನ ನೀಡಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪರೀಕ್ಷೆಯಲ್ಲಿ ತೇರ್ಗಡೆಯಾಗಿರತಕ್ಕದ್ದು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 55 ರಷ್ಟು ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾರಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರತಕ್ಕದ್ದು. ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡ ಮಾತನಾಡಲು , ಅರ್ಥ ಮಾಡಿಕೊಳ್ಳಲು ತಿಳಿದಿರಬೇಕು. ಕಂಪ್ಯೂಟರ್ ಅಪರೇಷನ್, ಅಪ್ಲಿಕೇಷನ್‌ನಲ್ಲಿ ಜ್ಞಾನ ಇರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು -40 ವರ್ಷಗಳು,
ಇತರೆ ಹಿಂದುಳಿದ ಜಾತಿ/ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು-38ವರ್ಷಗಳು,
ಸಾಮಾನ್ಯ ವರ್ಗದ ಅಭ್ಯರ್ಥಿಗಳು-35 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗ/ಪ್ರವರ್ಗಗಳನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ನಿಗದಿಪಡಿಸಲಾಗಿದೆ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಅವರು “ಸೇವೆ ಸಲ್ಲಿಸಿದ ಅವಧಿಯ” ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಯನ್ನು ನೀಡಲಾಗುವುದು.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ರೂ.500, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಜಾತಿ/ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿತ ಸಂದರ್ಶನದ ಪ್ರಕ್ರಿಯೆಯ ಮೂಲಕ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಕೆ ಮಾಡಿದ ಆರಂಭದ ದಿನದಂದು ವೆಬ್‌ಸೈಟ್ ತೆರೆದಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 06-04-2024 ರ ಸಾಯಂಕಾಲ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಓರ್ವ ಅಭ್ಯರ್ಥಿ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೆಲಿಟ್ಟು ಅದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್ಲೋಡ್ ಮಾಡಬೇಕು.
ಅರ್ಜಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮುಖಾಂತರವೇ ಬ್ಯಾಂಕಿನ ವೆಬ್‌ಸೈಟ್ www.karnatakaapex.com ಮೂಲಕವೇ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಪ್ರತಿಯನ್ನು ಪರಿಶೀಲನಾ ಸಮಯದಲ್ಲಿ ಹಾಜರುಪಡಿಸುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ