ಲೈಂಗಿಕ ಅಲ್ಪಸಂಖ್ಯಾತರಿಗೆ ಸಂತೋಷದ ವಿಚಾರವನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸರಕಾರ ಮಹತ್ತರವಾದ ಘೋಷಣೆಯನ್ನು ಮಾಡಿದೆ.
ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಶೇ.1 ರಷ್ಟು ಮೀಸಲಾತಿಯನ್ನು ಲೈಂಗಿಕ ಅಲ್ಪಸಂಖ್ಯಾತರಿಗೆ ನೀಡಬೇಕೆಂದು ಸರಕಾರ ಆದೇಶ ಹೊರಡಿಸಿದೆ.
1977 ರ ಕರ್ನಾಟಕ ನಾಗರಿಕ ಸೇವೆಗಳ ( ಸಾಮಾನ್ಯ ನೇಮಕಾತಿ ) ನಿಯಮಗಳ ನಿಯಮ 9 ನ್ನು ತಿದ್ದುಪಡಿ ಮಾಡಲಾಗಿದೆ.
ರಾಜ್ಯದಲ್ಲಿ ನಡೆಯುವ ಎಲ್ಲಾ ನೇಮಕಾತಿಗಳಲ್ಲಿ ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ. 1 ರಷ್ಟು ಮೀಸಲಾತಿ ನೀಡಲಾಗಿದೆ.
ಸರಕಾರಿ ನೇರ ನೇಮಕಾತಿಯ ಸಂದರ್ಭದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಶೇ.1 ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್ ಆದೇಶದ ಮೇರೆಗೆ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.