Karnatka Grama Panchayath Recruitment 2024: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಖಾಲಿ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ; 05-02-2024
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 23-02-2024
ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 14 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ: ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,196 ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಉದ್ಯೋಗ ಸ್ಥಳ: ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಅಭ್ಯರ್ಥಿಗಳು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕೆಂದು ಸೂಚನೆಯಲ್ಲಿ ತಿಳಿಸಲಾಗಿದೆ.
ವಾಸಸ್ಥಳ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿಯ ನಿವಾಸಿಯಾಗಿರಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ವಾಸಸ್ಥಳ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದ ತಹಶೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರ ಪಡೆದಿರತಕ್ಕದ್ದು.
ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗಿದಪಡಿಸಿದ ಕೊನೆಯ ದಿನಾಂಕ 23-02-2೦24 ಕ್ಕೆ ಅಭ್ಯರ್ಥಿಯ ವಯಸ್ಸು 18 ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತೆ ಇರತಕ್ಕದ್ದು.
ಸಾಮಾನ್ಯ ವರ್ಗ 18 ರಿಂದ 35 ವರ್ಷ, 2ಎ,2ಬಿ,3ಎ,3ಬಿ 18 ರಿಂದ 38 ವರ್ಷ, ಪ.ಜಾರಿ/ಪ.ಪಂ/ಪ್ರ.ವರ್ಗ-1 18 ರಿಂದ 40 ವರ್ಷ
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ https://shimoga.nic.in ರಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ನಂತರ ದಾಖಲೆಗಳ ಸಹಿತ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಲ್ಲಿ ಎರಡು ಪ್ರತಿ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆಯಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ದಿನಾಂಕ 23-02-2024 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು ನೇರವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಈ ವಿಳಾಸಕ್ಕೆ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ 23-02-2024 ಸಂಜೆ 5.30 ಗಂಟೆ ಮುಗಿದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ