ಕರ್ನಾಟಕ ಹೈಕೋರ್ಟ್ ನಿಂದ 150 ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ :₹ 25,000 ಆರಂಭಿಕ ಸಂಬಳ

Advertisements

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-10-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2021

ವೇತನ : ₹ 25,500 – ₹ 81,100

ಹುದ್ದೆಯ ಹೆಸರು : ಬೆರಳಚ್ಚುಗಾರ

ಹುದ್ದೆ ಸಂಖ್ಯೆ : 150

ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಮಾಡಿರಬೇಕು. ( ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್)

ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸ ಬಹುದು.

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿ ಪಾಸ್ ಮಾಡಿರಬೇಕು.

ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

ಅಪ್ಲೈ ಆನ್ಲೈನ್

ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

Leave a Comment