Karnataka High Court Jobs: ಹೈಕೋರ್ಟ್‌ನಲ್ಲಿ ಕ್ಲರ್ಕ್‌ ಹುದ್ದೆಗಳ ನೇಮಕಾತಿ; ಡಿಗ್ರಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ, ಮಾಸಿಕ ರೂ.25ಸಾವಿರ ಸಂಬಳ

Advertisements

Karnataka High Court Recruitment 2024: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 08 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಹುದ್ದೆಯ ಕುರಿತು ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಹೈಕೋರ್ಟ್‌ ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಯ ಪೋಸ್ಟಿಂಗ್‌ ನಡೆಯಲಿದೆ. ಹುದ್ದೆಯ ಕುರಿತು ಆಸಕ್ತಿ ಇರುವ ಅಭ್ಯರ್ಥಿಗಳು 17-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-04-2024

ಹುದ್ದೆಯ ವಿವರ ಇಲ್ಲಿದೆ;
ಹುದ್ದೆಯ ಹೆಸರು ಹಾಗೂ ಸಂಖ್ಯೆ: ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 08 ಹುದ್ದೆಗಳಿದ್ದು, ಕಾನೂನು ಗುಮಾಸ್ತ, ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25000 ವೇತನವಿರಲಿದೆ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಕರ್ನಾಟಕ ನೇಮಕಾತಿ ಅಧಿಸೂಚನೆಯಲ್ಲಿ ನೀಡಿರುವ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 17-Apr-2024 ರಂತೆ 30 ವರ್ಷ ಮೀರಿರಬಾರದು. ಕರ್ನಾಟಕ ಹೈಕೋರ್ಟ್‌ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಶೈಕ್ಷಣಿಕ ದಾಖಲೆ, ಸಾಧನೆಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ