ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಸಂಪೂರ್ಣ ವಿವರ ಈ ಕೆಳಗಿನಂತಿವೆ.
ಹುದ್ದೆ : ಅಸಿಸ್ಟೆಂಟ್ ಎಕ್ಸಿಕ್ಯುಟಿವ್
ಸೀಡ್ಸ್ ಆಫೀಸರ್
ಕೆಮಿಸ್ಟ್
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 08,2021
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಬಿಕಾಂ/ಬಿಬಿಎ/ಬಿಬಿಎಂ/ಕೆಮಿಸ್ಟ್ರಿ ಯಲ್ಲಿ ಬಿಎಸ್ಸಿ ಪದವಿ/ಕೃಷಿ ಪದವಿ ಹೊಂದಿರಬೇಕು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,400/- ರಿಂದ 62,600/-ವೇತನ ನಿಗದಿಯಾಗಿದೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500/- ಶುಲ್ಕ ಪಾವತಿಸಬೇಕಾಗುತ್ತದೆ. ಉಳಿದವರು ರೂ.1000/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
ಪ.ಜಾತಿ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kofchitradurga.com/ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 08, 2021ರ ಒಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು. (ಸಂಜೆ 5.30 ರ ಒಳಗೆ)
ಅರ್ಜಿ ಸಲ್ಲಿಸಬೇಕಾದ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು,
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ, ಸಂಘಗಳ ಒಕ್ಕೂಟ ನಿಯಮಿತ ಫ್ಲಾಟ್ ಸಂಖ್ಯೆ:74/ಎ,
ಕೆಳಗಿಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ- 577501