ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ನಾತಕ ಪದವಿಗಳ ಪ್ರವೇಶ ಪ್ರಕ್ರಿಯೆ : ಕೂಡಲೇ ಅರ್ಜಿ ಸಲ್ಲಿಸಿ

Advertisements

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಅಡಿಯಲ್ಲಿ ಬರುವ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ, ಬೆಂಗಳೂರು, ಶಿವಮೊಗ್ಗ, ಹಾಸನ ಮತ್ತು ಗದಗ, ಹೈನುಗಾರಿಕೆ ಮಹಾವಿದ್ಯಾಲಯ ಬೆಂಗಳೂರು ಮತ್ತು ಗುಲ್ಬರ್ಗಾ ಹಾಗೂ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರು, ಇಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿನ ವಿವಿಧ ಸಾಲಿನ ಸ್ನಾತಕ ಪದವಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೆ.ಸಿ.ಇ.ಟಿ (KCET- 2020) ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭರ್ತಿಯಾಗದೆ ಉಳಿದಿರುವ ಪ್ರವರ್ಗವಾರು ಸೀಟುಗಳನ್ನು ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು KCET-2020 ಪರೀಕ್ಷೆ ಬರೆದ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.kvafsu.edu.in ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಧೃಢೀಕರಿಸಿ, ನಿಗದಿ ಪಡಿಸಿದ ಅರ್ಜಿ ಶುಲ್ಕದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಡೀನ್ ಮತ್ತು ಅಧ್ಯಕ್ಷರು ಸ್ನಾತಕ ಪ್ರವೇಶ ಸಮಿತಿ 2020-21,
ಪಶುವೈದ್ಯಕೀಯ ಮಹಾವಿದ್ಯಾಲಯ,
ಹೆಬ್ಬಾಳ,
ಬೆಂಗಳೂರು-560024

(Dean and Chairman,UG Admission Committee 2020-21, Veterinary College, Hebbal, Bengaluru- 560 024)

ಅರ್ಜಿ ಸಲ್ಲಿಸುವ ದಿನಾಂಕ : 8 ಫೆಬ್ರವರಿ, 2021 ರಿಂದ 20, ಫೆಬ್ರವರಿ 2021 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಕೌನ್ಸಲಿಂಗ್ ಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ (ಅಂತರ್ಜಾಲ)
www.kvafsu.edu.in ರಲ್ಲಿ ಪಡೆಯಬಹುದು.

Leave a Comment