ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನುಆಹ್ವಾನಿಸಲಾಗಿದೆ.
ಹುದ್ದೆ : ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 16, 2021
ಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳವರೆಗೆ ಇರುತ್ತದೆ. ಅಭ್ಯರ್ಥಿಗಳು ಮಂಡ್ಯ, ಚಾಮರಾಜನಗರ, ತುಮಕೂರು, ಯಾದಗಿರಿ ಈ ಜಿಲ್ಲೆಗಳಲ್ಲಿ ಕೆಲಸ ಮಾಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರು ಅಥವಾ ನಿವೃತ್ತ/ಸ್ವಯಂ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಲು ಸೂಚಿಸಲಾಗಿದೆ: Karnataka Gramin Bank, Branch Office, Ballari, Karnataka ಈ ವಿಳಾಸಕ್ಕೆ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 08392-236428