1000 VA Jobs:ಉದ್ಯೋಗಾಕಾಂಕ್ಷಿಗಳ ಗಮನಕ್ಕೆ; ಕೆಇಎ ಇಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್‌ ಬಿಡುಗಡೆ

Advertisements

Karnataka Revenue Department Recruitment: ಕರ್ನಾಟಕ ಸರಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಹುದ್ದೆಗೆ ಸಂಬಂಧಿಸಿದ ತಯಾರಿ ಮಾಡಿಕೊಳ್ಳಬಹುದು. ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಕರ್ನಾಟಕದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್‌ 5, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 04, 2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: ಮೇ, 07, 2024

ಹುದ್ದೆಯ ವಿವರ ಇಲ್ಲಿದೆ; ಉಳಿಕೆ ಮೂಲ ವೃಂದ- 869 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ- 131 ಹುದ್ದೆಗಳು

ವೇತನ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ ರೂ.21,400-42000ರೂ. ವೇತನ ದೊರಕಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಹುದ್ದೆಗೆ ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
(ಓಮ್ಮೆ ಪಾವತಿ ಮಾಡಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ)

ವಿದ್ಯಾರ್ಹತೆ: ವಿದ್ಯಾರ್ಹತೆಯ ಕುರಿತ ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ವಯೋಮಿತಿ: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್‌ -ಒಎಂಆರ್‌ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುವುದು.

ಆನ್ಲೈನ್‌ ಅರ್ಜಿ ಸಲ್ಲಿಕೆ ವೇಳಾಪಟ್ಟಿಯ ನೋಟಿಫಿಕೇಶನ್‌

ಅರ್ಜಿ ಸಲ್ಲಿಕೆಯ ನೇರ ಲಿಂಕ್‌

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯ ಈ ಲಿಂಕ್‌ ಕ್ಲಿಕ್‌ ಮಾಡಿ