KLA Recruitment 2024: ಕರ್ನಾಟಕ ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ

Advertisements

KLA Recruitment 2024: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಉಳಿಕೆ ಮೂಲ ವೃಂದ ಮತ್ತು ಸ್ಥಳೀಯ ವೃಂದದಲ್ಲಿನ (ಕಲ್ಯಾಣ-ಕರ್ನಾಟಕ) ವಾಹನ ಚಾಲಕ ಮತ್ತು ʼಡಿʼ ಗುಂಪು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಕುರಿತು ಅಧಿಸೂಚನೆ ಬಿಡುಗಡೆಗೊಂಡಿದೆ. ಒಟ್ಟು 32 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ಹುದ್ದೆಯ ವಿವರಗಳನ್ನು ನೀಡಲಾಗಿದ್ದು, ಓದಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2024
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 05-04-2024

ಹುದ್ದೆಯ ಹೆಸರು:
1: ವಾಹನ ಚಾಲಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 03 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. (ಉಳಿಕೆ ಮೂಲ ವೃಂದ 03 ಹುದ್ದೆಗಳು) ವೇತನ ಶ್ರೇಣಿ: ರೂ.21400/-ರೂ.42000/-
2: ಗ್ರೂಪ್‌ ಡಿ ಹುದ್ದೆಗಳು -ಒಟ್ಟ 29 ಹುದ್ದೆಗಳು ಖಾಲಿ ಇದೆ. ದಲಾತ್‌/ಕಾವಲುಗಾರರು/ಸ್ವೀಪರ್-ಕಮ್‌-ಸ್ಕ್ಯಾವೆಂಜರ್‌/ಸೆಕ್ಯೂರಿಗಾರ್ಡ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ-26 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ -03 ಹುದ್ದೆಗಳು.
ವೇತನ ಶ್ರೇಣಿ: ರೂ.17000-ರೂ.28950/-

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ 2(ಎ),2(ಬಿ),3(ಎ),3(ಬಿ) ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ: ವಾಹನ ಚಾಲಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ, ಮೋಟಾರು ಕಾರು/ಭಾರೀ ವಾಹನಗಳ ಚಾಲನೆಯ ಅಧಿಕೃತ ಪರವಾನಗಿಯನ್ನು ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು.ಮೋಟಾರು ಕಾರುಗಳ ಚಾಲನೆಯಲ್ಲಿ ಮೂರು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವವನ್ನು ಹೊಂದಿರಬೇಕು.
ಗ್ರೂಪ್‌ ʼಡಿ” ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.

ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ, ಸಾಮಾನ್ಯ ವರ್ಗ 35ವರ್ಷ, ಪ್ರವರ್ಗ IIಎ,IIಬಿ,IIIಎ, ಮತ್ತು IIIಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-I 40 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ವಾಹನ ಚಾಲಕರ ಹುದ್ದೆಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಅವರಿಂದ ವಾಹನ ಚಾಲನಾ ಪರೀಕ್ಷೆಯನ್ನು ನಡೆಸಿ, ಅದರಲ್ಲಿ ಉತ್ತೀರ್ಣರಾದವರಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದ. ʼಡಿʼ ಗುಂಪು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಡಲಾಗುವುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಅರ್ಜಿಗಳನ್ನು ಕೊನೆಯ ದಿನಾಂಕ 05-04-2024 ರಂದು ಸಂಜೆ 5ಗಂಟೆಯ ಒಳಗೆ ಅಂಚೆಯ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ:5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ವಿಳಾಸಕ್ಕೆ ಖುದ್ದಾಗಿ ಅಥವಾ ವಿಧಾನ ಸೌಧದ 2 ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 216, ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸತಕ್ಕದ್ದು.

ಅರ್ಜಿದಾರರು ಮೇಲ್ಕಂಡ ಹುದ್ದೆಗಳ ಅಭ್ಯರ್ಥಿಗಳ ವಾಹನ ಚಾಲನಾ ಪರೀಕ್ಷೆ ಮತ್ತು ಸಂದರ್ಶನ ದಿನಾಂಕ ಮತ್ತು ಸಮಯವನ್ನು ಕರ್ನಾಟಕ ವಿಧಾನ ಪರಿಷತ್ತಿನ ವೆಬ್‌ಸೈಟ್‌ ವಿಳಾಸ: https://www.kla.kar.nic.in/council/career.htm ನಲ್ಲಿ ಪ್ರಕಟ ಮಾಡಲಾಗುವುದು. ಈ ಕುರಿತು ಯಾವುದೇ ಪತ್ರ ಕಳುಹಿಸಲಾಗುವುದಿಲ್ಲ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 080-22258569 ನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ