KLA Recruitment 2024: ವರದಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

KLA Recruitment 2024: ಕರ್ನಾಟಕ ವಿಧಾನಸಭೆಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 6 ಹುದ್ದೆಗಳು ಖಾಲಿ ಇದ್ದು, ರಿಪೋರ್ಟರ್‌ ಹುದ್ದೆಗಳಿಗೆ ಅರ್ಜಿಯನ್ನು ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 30-Apr-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 14-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

ಹುದ್ದೆಯ ವಿವರ ಇಲ್ಲಿದೆ; ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ (KLA) ಯಲ್ಲಿ ಖಾಲಿ ಇರುವ 6 ಹುದ್ದೆಗಳು ಖಾಲಿ ಇದ್ದು, ವರದಿಗಾರ ಹುದ್ದೆಗೆ ಭರ್ತಿ ಮಾಡಲಾಗುತ್ತದೆ.

ಹುದ್ದೆಯ ವಿವರ:
ಕನ್ನಡ ವರದಿಗಾರ 5 ಹುದ್ದೆಗಳು
ಇಂಗ್ಲಿಷ್ ವರದಿಗಾರ 1 ಹುದ್ದೆಗಳು

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37900-70850/- ಪ್ರತಿ ತಿಂಗಳು ಮೇಲ್ಕಂಡ ಹುದ್ದೆಗೆ ವೇತನ ನೀಡಲಾಗುವುದು.

ಶೈಕ್ಷಣಿಕ ಅರ್ಹತೆ: KLA ಅಧಿಕೃತ ಅಧಿಸೂಚನೆಯ ಪ್ರಕಾರ, ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಮೇಲ್ಕಂಡ ಅಭ್ಯರ್ಥಿಗಳಿಗೆ ಅಭ್ಯರ್ಥಿಯು 30-Apr-2024 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಆಗಿರಬೇಕು. CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, SC/ST/Cat-I ಅಭ್ಯರ್ಥಿಗಳಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST/Cat-1 ಈ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಸಾಮಾನ್ಯ/OBC ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಭಾರತೀಯ ಪೋಸ್ಟಲ್ ಆರ್ಡರ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ವಿಳಾಸ: Secretary, Karnataka Vidhana Parishad Secretariat, PO Box No. 5074, 1st Floor, Vidhana Soudha, Bengaluru – 560001 ಇಲ್ಲಿಗೆ 30-Apr-2024 ಅಥವಾ ಮೊದಲು ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು kla.kar.nic.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.