ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಮತ್ತು
ಕೆಮಿಸ್ಟ್
ಹುದ್ದೆಯ ಸಂಖ್ಯೆ : 06
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021(5.30p.m ರ ಒಳಗೆ)
ವಯೋಮಿತಿ : ಹುದ್ದೆಗಳಿಗನುಸಾರವಾಗಿ 08 ಮಾರ್ಚ್, 2021 ಗೆ ಅನುಸಾರವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಸಿಎಟಿ-1 ಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಹಾಗೆಯೇ ಸಿಎಟಿ-2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಸಿಎಟಿ-1 ಮತ್ತು ಪಿಎಚ್ ಅಭ್ಯರ್ಥಿಗಳಿಗೆ ರೂ.500/- ಹಾಗೂ ಉಳಿದ ಅಭ್ಯರ್ಥಿಗಳಿಗೆ ರೂ.1000/- ಶುಲ್ಕವಿರುತ್ತದೆ.
ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ :ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.
ವಿದ್ಯಾರ್ಹತೆ :ಹುದ್ದೆಗಳಿಗನುಸಾರವಾಗಿ ಪದವಿ/ಬಿ.ಎಸ್ಸಿ/ಬಿಬಿಎಂ/ಬಿಬಿಎ/ಬಿಕಾಂ ವಿದ್ಯಾರ್ಹತೆ ಯನ್ಯ ಅಭ್ಯರ್ಥಿಗಳು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ಸೈಟ್ ಗೆ ಭೇಟಿ ನೀಡಿ
www.kofchitradurga.com
ನೋಟಿಫಿಕೇಶನ್ ಕಾಗಿ ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ