ಕೆಒಎಫ್ ವಿವಿಧ ಹುದ್ದೆ: ಎಪ್ರಿಲ್ 8 ಕಡೇ ದಿನಾಂಕ

Advertisements

ಕರ್ನಾಟಕ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಕೇಂದ್ರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 8,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2021 ಸಂಜೆ 5.30

ಹುದ್ದೆಗಳ ವಿವರ : ಜನರಲ್ ಮ್ಯಾನೇಜರ್ 1, ಅಸಿಸ್ಟೆಂಟ್ ಮ್ಯಾನೇಜರ್ 2, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ 1, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ (ಗುಣನಿಯಂತ್ರಣ) 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

ವಯೋಮಿತಿ : ಜನರಲ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 40 ಗರಿಷ್ಠ 52 ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ
ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1 – 40 ವರ್ಷ ವರ್ಷ, ಹಿಂದುಳಿದ ಜಾತಿ/ ಸಮುದಾಯಕ್ಕೆ 38 ವರ್ಷ, ಸಾಮಾನ್ಯ ವರ್ಗದವರಿಗೆ‌ 35 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500/- ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1000/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅಭ್ಯರ್ಥಿಗಳಿಗೆ ಕನ್ನಡ ಜ್ಞಾನ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪದವಿಯನ್ನು ಪರಿಗಣಿಸುವುದಿಲ್ಲ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಕೆಲಸದ ಅನುಭವ, ಲಿಖಿತ ಪರೀಕ್ಷೆ, ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಅರ್ಹತೆಯ ಆಧಾರದ ‌ಮೇಲೆ ಆಯ್ಕೆ ಮಾಡಲಾಗುತ್ತದೆ.

ವೆಬ್‌ಸೈಟ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಕೆಸಿಒಜಿಎಫ್.ಲಿ.,ನಂ.11,4ನೇ ಮಹಡಿ, ಬ್ಲೂ ಕ್ರಾಸ್ ಛೇಂಬರ್ಸ್, ಇನ್ಫ್ರೆಂಟ್ರಿ ಅಡ್ಡ ರಸ್ತೆ ಬೆಂಗಳೂರು -01

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment