ಕೆಒಎಫ್ ( ಕರ್ನಾಟಕ ಆಯಿಲ್ ಫೆಡರೇಶನ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 08 , ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2021(5:30pm)
ಅರ್ಜಿ ಶುಲ್ಕ: ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಸಿಎಟಿ -1 ಅಭ್ಯರ್ಥಿಗಳಿಗೆ ರೂ.500/- ಹಾಗೂ ಜನರಲ್ ಅಭ್ಯರ್ಥಿಗಳಿಗೆ ರೂ.1,000/- ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಹುದ್ದೆ: ಜನರಲ್ ಮ್ಯಾನೇಜರ್-1
ಅಸಿಸ್ಟೆಂಟ್ ಮ್ಯಾನೇಜರ್ -2
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ – 1
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ( ಕ್ವಾಲಿಟಿ ಕಂಟ್ರೋಲ್)-1
ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಮಾಸ್ಟರ್ಸ್ ಡಿಗ್ರಿ, ಎಂಬಿಎ, ಡಿಗ್ರಿ, ಬಿಎಸ್ಸಿ ಉತ್ತೀರ್ಣಗೊಂಡಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 52 ವಯೋಮಿತಿ ಹೊಂದಿರಬೇಕು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಸಿಎಟಿ-1 ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳು ಸಂಸ್ಥೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 8 ಎಪ್ರಿಲ್, 2021 ಸಂಜೆ 5.30 ,ರೊಳಗಾಗಿ ಸ್ಪೀಡ್ ಪೋಸ್ಟ್, ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ:
Managing Director, K.C.O.G.F Limited, No.11, 4th Floor, Blue Cross Chambers, Infantry Cross, Bengaluru – 01
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: