Kolar Anganwadi Recruitment 2024: ಮಹಿಳೆಯರಿಗೆ ಬೃಹತ್‌ ಉದ್ಯೋಗಾವಕಾಶ; 513 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ

Advertisements

WCD Kolar Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಕೋಲಾರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 513 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋಲಾರ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 19-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-04-2024

ಹುದ್ದೆಯ ವಿವರ;
ಹುದ್ದೆ ಸಂಖ್ಯೆ: 513 ಹುದ್ದೆಗಳು ಖಾಲಿ ಇದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ- 120 ಹುದ್ದೆಗಳು
ಅಂಗನವಾಡಿ ಸಹಾಯಕಿ- 393 ಹುದ್ದೆಗಳು

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ- ಪಿಯುಸಿ, ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಸಹಾಯಕಿ – ಈ ಹುದ್ದೆಗೆ ಅರ್ಜಿ ಸಲ್ಲಿಸಿದವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ವರ್ಷ, ಗರಿಷ್ಠ 35 ವರ್ಷ ಆಗಿರಬೇಕು. PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಬೇಕಾದಾಗ ದಾಖಲೆಗಳು ಯಾವುದು:
ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವಿದ್ಯಾರ್ಹತೆಯ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ, ಅಂಗವಿಕಲತೆ ಪ್ರಮಾಣ ಪತ್ರ, ವಿಚ್ಛೇದನಾ ಪ್ರಮಾಣ ಪತ್ರ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ