ಕೊಂಕಣ ರೈಲ್ವೆಯಲ್ಲಿ ಉದ್ಯೋಗಾವಕಾಶ, ಕಾರಾವರದಲ್ಲಿ ನೇಮಕ

Advertisements

ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ (ಕೆಆರ್ ಸಿಎಲ್) ಕರಾರುದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-07-2021 (5:30 ಗಂಟೆಗಳವರೆಗೆ) ತೆರೆದಿರುತ್ತದೆ.

ಹುದ್ದೆ : ಉಪಮಹಾ ವ್ಯವಸ್ಥಾಪಕ (ಫೈನಾನ್ಸ್) – 1 ಹುದ್ದೆ
ವಿಭಾಗ ಅಧಿಕಾರಿ – 2 ಹುದ್ದೆಗಳು
ಸಹಾಯಕ ಲೆಕ್ಕ ಅಧಿಕಾರಿ -2 ಹುದ್ದೆಗಳು
ಲೆಕ್ಕ ಸಹಾಯಕ – 7 ಹುದ್ದೆಗಳು
ವೈದ್ಯಕೀಯ ಅಧಿಕಾರಿ – 1 ಹುದ್ದೆ

ಪೋಸ್ಟ್ ಮಾಡುವ ಸ್ಥಳ – ಕಾರವಾರ, ಕರ್ನಾಟಕ

ಉಪಮಹಾ ವ್ಯವಸ್ಥಾಪಕ ( ಫೈನಾನ್ಸ್ ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎಂಎ/ಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿಯು ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.92,200/- ವೇತನವಿರುತ್ತದೆ.

ವಿಭಾಗ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಬಿ.ಕಾಂ ವಿದ್ಯಾರ್ಹತೆಯನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು. ಅಭ್ಯರ್ಥಿಯ ವಯೋಮಿತಿಯು‌ ಗರಿಷ್ಠ 40 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.55,700/- ವೇತನ ನಿಗದಿಪಡಿಸಲಾಗಿದೆ.

ಸಹಾಯಕ ಲೆಕ್ಕಾಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎಂಎ/ಸಿಎ ವಿದ್ಯಾರ್ಹತೆಯನ್ನು ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿಯು ಗರಿಷ್ಠ 35 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 65,650/- ವೇತನವಿರುತ್ತದೆ.

ಲೆಕ್ಕ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಯುನಿವರ್ಸಿಟಿಯಿಂದ ಬಿ.ಕಾಂ. ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 35 ವರ್ಷ ಮೀರಿರಬಾರದು. ರೂ.34,200/- ವೇತನ ನಿಗದಿಪಡಿಸಲಾಗಿದೆ.

ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.75,000/- ವೇತನವಿರುತ್ತದೆ. ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಂದ ಪ್ರಾಮಾಣಿಕೃತ ಎಂಬಿಬಿಎಸ್ ನ್ನು ಪಡೆದಿರಬೇಕು. ಅಭ್ಯರ್ಥಿಗಳು ಪ್ರಸ್ತುತ ಹುದ್ದೆಯಲ್ಲಿ ಒಂದು ವರ್ಷದ ಅನುಭವವನ್ನು ಹೊಂದಿರಬೇಕು. ಈ ಹುದ್ದೆಯು ತಾತ್ಕಾಲಿಕವಾಗಿದ್ದು ಒಂದು ವರ್ಷದ ಅವಧಿಯವರೆಗೆ ಇರುತ್ತದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ‌ಸಡಿಲಿಕೆಯನ್ನು ನೀಡಲಾಗಿದೆ.

ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳನ್ನು ಇ-ಮೇಲ್ ಮೂಲಕ ಸಲ್ಲಿಸಬೇಕು. ಇ-ಮೇಲ್ ವಿಳಾಸ : [email protected] ಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment