Koppal Grama Panchayath Recruitment 2024: ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
ವಿದ್ಯಾರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫೀಕೋಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 03-04-2024 ಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ಇರಬೇಕು.
ಸಾಮಾನ್ಯ ವರ್ಗ- 18 ರಿಂದ 35 ವರ್ಷ
2ಎ,2ಬಿ,3ಎ,3ಬಿ ಅಭ್ಯರ್ಥಿಗಳು 18 ರಿಂದ 38 ವರ್ಷ
ಪ.ಜಾತಿ/ಪ.ಪಂ/ಪ್ರವರ್ಗ-1 -18 ರಿಂದ 40 ವರ್ಷ
ಅರ್ಜಿ ಶುಲ್ಕ: ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾರಿ ಮಾಡಿಕೊಳ್ಳುತ್ತಿರುವುದರಿಂದ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ;
ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಕೊಪ್ಪಳದಲ್ಲಿ ದ್ವಿ ಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆದಿರಬೇಕು.
ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಪುನಃ ಆಹ್ವಾನಿಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲೆಯ ವೆಬ್‌ಸೈಟ್‌ನಲ್ಲಿ www.koppal.nic.in ರಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಕೊಪ್ಪಳ ಇಲ್ಲಿಗೆ ರಜೆ ದಿನಗಳನ್ನು ಹೊರತು ಪಡಿಸಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕ 3-04-2024 ಸಾಯಂಕಾರ 5.30 ರೊಳಗೆ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ