ಫೆಬ್ರವರಿ 28 ರಂದು ನಡೆಯುವ ಎಫ್ ಡಿ ಎ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, ಪಾಸ್‌ಪೋರ್ಟ್, ಸರ್ಕಾರಿ ನೌಕರರ ಐಡಿ ಇವುಗಳಲ್ಲಿ ಯಾವುದಾದರು ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಬಾಗಲಕೋಟೆ ಜಿಲ್ಲೆಯಲ್ಲಿ46 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,487 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 12,968 ವಿದ್ಯಾರ್ಥಿಗಳು , ಜಮಖಂಡಿ ಯ 12 ಕೇಂದ್ರಗಳಲ್ಲಿ 5016 ಅಭ್ಯರ್ಥಿಗಳು, ಮುಧೋಳ 1 ಪರೀಕ್ಷಾ ಕೇಂದ್ರಗಳಲ್ಲಿ 503 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಹಾಜರಿರಬೇಕು. ಪರೀಕ್ಷೆ ಬೆಳಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ಬೆಳಗ್ಗೆ 9.50 ರ ನಂತರ, ಮಧ್ಯಾಹ್ನ 1.50 ರ ನಂತರ ಬರುವ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಪರೀಕ್ಷೆಗೆ ಮೊಬೈಲ್ ಫೋನ್ ಹಾಗೂ ಇತರ ಎಲೆಕ್ಟ್ರಿಕ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅವುಗಳನ್ನು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಇಡಲು ಅವಕಾಶ ವಿದೆ.
ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯನ್ನು ಸ್ಯಾನಿಟೈಝ್ ಮಾಡಲಾಗುತ್ತದೆ. ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ಫೆಬ್ರವರಿ 28 ರಂದು ಎಫ್‍ಡಿಎ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10 – 11.30 ವರೆಗೆ ಸಾಮಾನ್ಯ ಜ್ಞಾನ, ಮಧ್ಯಾಹ್ನ 2 – 3.30 ವರೆಗೆ ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್ ವಿಷಯಗಳ ಪರೀಕ್ಷೆ ನಡೆಯಲಿದೆ.