Karnataka SSLR Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 364 ಲ್ಯಾಂಡ್ ಸರ್ವೇಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024
ಭೂಮಾಪಕರ (HK) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 06-Jul-2024
ಭೂಮಾಪಕರ (HK) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 07-Jul-2024
ಭೂಮಾಪಕರ (RPC) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-ಜುಲೈ-2024
ಭೂಮಾಪಕರ (RPC) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 21-ಜುಲೈ-2024
ಹುದ್ದೆಯ ಈ ಕೆಳಗೆ ನೀಡಲಾಗಿದೆ.
ಭೂಮಾಪಕರ ಹುದ್ದೆ:
ಹೈದರಾಬಾದ್ -ಕರ್ನಾಟಕ ವೃಂದ (HK)-100
ಉಳಿಕೆ ಮೂಲ ವೃಂದ (RPC)-264
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ITI, 12th, ಡಿಪ್ಲೊಮಾ, B.E ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
CAT-2ಎ/2ಬಿ/3ಎ/3ಬಿ- 03 ವರ್ಷ, SC/ST/Cat-1- 05 ವರ್ಷ, PWD/ವಿಧವೆ- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸೂಚಿಸಲಾಗಿದೆ.
ವೇತನ: ಅಭ್ಯರ್ಥಿಗಳಿಗೆ ಮಾಸಿಕ ರೂ.23,500-ರೂ.47,650 ಶ್ರೇಣಿಯಲ್ಲಿ ವೇತನ ನೀಡಲಾಗುವುದು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ಗೆ ಕ್ಲಿಕ್ ಮಾಡಿ
ಭೂ ಮಾಪಕ (HK), ಭೂ ಮಾಪಕ (RPC) ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ