KAS Jobs 2024: ಕೆಪಿಎಸ್‌ಸಿ ಇಂದ ಕೆಎಎಸ್‌ ಹುದ್ದೆಗಳ ನೇಮಕ; 384 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Advertisements

Karnataka KAS Jobs 2024: ಕರ್ನಾಟಕ ಗೆಜೆಟೆಡ್‌ ಪ್ರೊಬೆಷನರ್‌ ನಿಯಮಗಳಡಿಯಲ್ಲಿ ಗೆಜೆಟೆಡ್‌ ಪ್ರೊಬೆಷನರ್‌ 2023-24 ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಒಟ್ಟು 384 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಆರಂಭಿಕ ದಿನಾಂಕ; 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : 05-05-2024

ಹುದ್ದೆಗಳ ವಿವರ;
ಹುದ್ದೆ ಹೆಸರು: ಗೆಜೆಟೆಡ್‌ ಪ್ರೊಬೆಷನರ್‌ (ಕೆಎಎಸ್‌ ಹುದ್ದೆಗಳು) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ:
ಗ್ರೂಪ್‌ ಎ ಹುದ್ದೆಗಳು: 159
ಗ್ರೂಪ್‌ ಬಿ ಹುದ್ದೆಗಳು: 225

ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ನೆಟ್‌ಬ್ಯಾಂಕಿಂಗ್‌, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌,ಯುಪಿಐ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಹೊಸದಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅರ್ಜಿದಾರರು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ https://kpsconline.karnataka.gov.in ಗೆ ಭೇಟಿ ನೀಡಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಲು New Registration ಲಿಂಕ್‌ಅನ್ನು ಕ್ಲಿಕ್ ಮಾಡಬೇಕು.
ನೋಂದಣಿ ಮತ್ತು ಲಾಗಿನ್‌ ರುಜುವಾತುಗಳನ್ನು ಮಾಡಲು ಇಮೇಲ್‌ ಐಡಿ ಮತ್ತು ಮೊಬೈಲ್‌ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು.
ಒಮ್ಮೆ ನೋಂದಾಯಿಸಿದ ಮತ್ತು ಲಾಗಿನ್‌ ಆದ ನಂತರ ಅರ್ಜಿದಾರರ ವಿವರಗಳ ನೋಂದಣಿ ಕ್ಲಿಕ್‌ ಮಾಡಿ ಅಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಬೇಕು.
ಅಭ್ಯರ್ಥಿಗಳು ಒಮ್ಮೆ ಮಾತ್ರ ಅರ್ಜಿ ಭರ್ತಿ ಮಾಡಬೇಕಾಗುತ್ತದೆ. ಹಾಗಾಗಿ ನಿಮ್ಮ user id ಮತ್ತು passoword ಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು. ಅನಂತರ ಸಲ್ಲಿಸು ಬಟನ್‌ ಕ್ಲಿಕ್‌ ಮಾಡಬೇಕು. ಸಲ್ಲಿಸಿದ ನಂತರ ವಿವರಗಳನ್ನು ತಪ್ಪಾಗಿ ಸಲ್ಲಿಸಿದ್ದಲ್ಲಿ ಸರಿಪಡಿಸಿಕೊಳ್ಳಲು ಆಯೋಗಕ್ಕೆ ಪತ್ರ ವ್ಯವಹಾರ ಅಥವಾ ಇ-ಮೇಲ್‌ ಮೂಲಕ ಕಳುಹಿಸುವ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡಿ, ಭಾವಚಿತ್ರ./ಸಹಿ/ವಯೋಮಿತಿ/ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಅಪ್ಲೋಡ್‌ ಮಾಡಿದ ನಂತರ ಶುಲ್ಕವನ್ನು ನೆಟ್‌ಬ್ಯಾಂಕಿಂಗ್‌/ಡೆಬಿಟ್‌ ಕಾರ್ಡ್‌/ಕ್ರೆಡಿಟ್‌ ಕಾರ್ಡ್‌/ಯುಪಿಐ ಮೂಲಕ ಸಂದಾಯ ಮಾಡಬಹುದು.

ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ಭಾವಚಿತ್ರ/ಸಹಿಯನ್ನು ಅಪ್ಲೋಡ್‌ ಮಾಡದೇ ಇರುವ ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್‌ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆ ಉಂಟಾದಲ್ಲಿ ಈ ಕೆಳಕಂಡ ಹೆಲ್ಪ್‌ಲೈನ್‌ ನಂಬರ್‌ ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ. 080-30574957/30574901

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ