KPSC Jobs: ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕರ ಹುದ್ದೆ; ಇಂದಿನಿಂದ ಅರ್ಜಿ ಆಹ್ವಾನ

Advertisements

KPSC Motor Vehicle Inspector Recruitment 2024: ಕರ್ನಾಟಕ ಲೋಕ ಸೇವಾ ಆಯೋಗವು ನಾಗರಿಕ ಸೇವೆಗಳು (ನೇರ ನೇಮಕಾತಿ) ಹಾಗೂ ಕರ್ನಾಟಕ ಸಾಮಾನ್ಯ ಸೇವೆಗಳು ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್‌ ʼಸಿʼ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಕುರಿತು ಅಧಿಸೂಚನೆಯಲ್ಲಿ ಮಾರ್ಚ್‌ ತಿಂಗಳಲ್ಲಿ ಬಿಡುಗಡೆ ಮಾಡಿತ್ತು.

ಮೋಟಾರು ವಾಹನ ನಿರೀಕ್ಷಕರು (RPC) ಹಾಗೂ ಹೈದರಬಾದ್‌ ಕರ್ನಾಟಕ ( HK) ವೃಂದ ಇಲ್ಲಿ ಖಾಲಿ ಇರುವ ಒಟ್ಟು 76 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ತಡ ಮಾಡದೆ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-04-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-05-2024
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21-05-2024

ಹುದ್ದೆಗಳ ಕುರಿತ ವಿವರ ಇಲ್ಲಿದೆ
ಇಲಾಖೆಯ ಹೆಸರು : ಸಾರಿಗೆ ಇಲಾಖೆ
ಹುದ್ದೆ: ಉಳಿಕೆ ಮೂಲ ವೃಂದದ ಗ್ರೂಪ್‌ ಸಿ ಹುದ್ದೆಗಳು (70), ಗ್ರೂಪ್‌ ಸಿ ಹುದ್ದೆಗಳು (6)
ಹುದ್ದೆಗಳ ಸಂಖ್ಯೆ: 76
ಹುದ್ದೆಯ ಹೆಸರು: ಮೋಟಾರು ವಾಹನ ನಿರೀಕ್ಷಕರು

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ 2ಎ,2ಬಿ,3ಎ,3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ:
ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸುವ ಯಾವೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಆಯ್ಕೆಯ ಅವಕಾಶವಿರುವುದಿಲ್ಲ.

ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಗಳು ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಮೂರು ವರ್ಷಗಳ ಅವಧಿಯ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯು ನೀಡುವ ಮೂರು ವರ್ಷಗಳ ಅವಧಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರಬೇಕು;
ನಿಗದಿಪಡಿಸಿರುವ ವಿದ್ಯಾರ್ಹತೆಯ ಅಂಕಪಟ್ಟಿ/ ಪ್ರಮಾಣ ಪತ್ರ / ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಪರಿಗಣಿಸಲಾಗುವುದಿಲ್ಲ.
ವೇತನ ಶ್ರೇಣಿ: ರೂ.33,450-ರೂ.62,600/- ವೇತನ ನಿಗದಿಪಡಿಸಲಾಗಿದೆ.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯ ಅರ್ಹತೆ -35 ವರ್ಷ ನಿಗದಿಪಡಿಸಲಾಗಿದೆ. ಪ್ರವರ್ಗ 2(ಎ),2(ಬಿ),3(ಎ),3(ಬಿ)-38 ವರ್ಷ, ಪ.ಜಾ/ಪ.ಪಂ/ಪ್ರವರ್ಗ1-40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಯ ಡೈರೆಕ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್‌ ಮಾಡಿ