Karnataka Pdo Recruitment 2024: ಕೆಪಿಎಸ್‌ಸಿ ಇಂದ ಪಿಡಿಒ ಹುದ್ದೆಗಳ ನೇಮಕಾತಿ; ಡಿಗ್ರಿ ಪಾಸಾದವರಿಗೆ ಜಾಬ್‌, ವೇತನ ರೂ.70,850

Advertisements

KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗವು (KPSC) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 247 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ʼಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

ಹುದ್ದೆಯ ವಿವರ;
ಹುದ್ದೆ ಹೆಸರು:
ಪಂಚಾಯತ್‌ ಡೆವಲಪ್‌ಮೆಂಟ್‌ ಆಫೀಸರ್‌ (HK)-97 ಹುದ್ದೆ
ಪಂಚಾಯತ್‌ ಡೆವಲಪ್‌ಮೆಂಟ್‌ ಆಫೀಸರ್‌ (RPC)- 150 ಹುದ್ದೆ
ಒಟ್ಟು 247 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವೇತನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,900-ರೂ.70,850 ವೇತನವಿರಲಿದೆ.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ, ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷ, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಶೈಕ್ಷಣಿಕ ಅರ್ಹತೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಪಿಡಿಒ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
ನೋಟಿಫಿಕೇಶನ್‌ -HK
ನೋಟಿಫಿಕೇಶನ್‌ -RPC
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ