KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗವು (KPSC) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 486 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನಿಯರ್ ಇಂಜಿನಿಯರ್, ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 28-ಮೇ-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024
KPSC ಇಲಾಖೆಗಳ ಆಧಾರದ ಮೇಲೆ ಹುದ್ದೆಯ ವಿವರಗಳು
- ಅಂತರ್ಜಲ ನಿರ್ದೇಶನಾಲಯ 5 ಹುದ್ದೆ
- ಪೌರಾಡಳಿತ ನಿರ್ದೇಶನಾಲಯ 84 ಹುದ್ದೆಗಳು
- ಸಾರ್ವಜನಿಕ ಗ್ರಂಥಾಲಯ ಇಲಾಖೆ 34 ಹುದ್ದೆಗಳು
- ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ 63 ಹುದ್ದೆಗಳು
- ಜಲಸಂಪನ್ಮೂಲ ಇಲಾಖೆ 300 ಹುದ್ದೆಗಳು
ಪೋಸ್ಟ್‌ಗಳ ಆಧಾರದ ಮೇಲೆ ಕೆಪಿಎಸ್‌ಸಿ ಹುದ್ದೆಗಳು
- ಜೂನಿಯರ್ ಇಂಜಿನಿಯರ್ (Junior Engineer) -341 ಹುದ್ದೆಗಳು
- ನೀರು ಸರಬರಾಜುದಾರರು (Water Suppliers) – 4 ಹುದ್ದೆ
- ಅಧೀನ ನೀರು ಸರಬರಾಜುದಾರರು( Subsidiary Water Suppliers)- 5 ಹುದ್ದೆ
- ಕಿರಿಯ ಆರೋಗ್ಯ ನಿರೀಕ್ಷಕರು (Junior Health Inspectors)- 39 ಹುದ್ದೆಗಳು
- ಸಹಾಯಕ ಗ್ರಂಥಪಾಲಕರು (Assistant Librarian)- 21 ಹುದ್ದೆಗಳು
- ಕೈಗಾರಿಕಾ ವಿಸ್ತರಣಾ ಅಧಿಕಾರಿ (Industrial Extention Officer) – 63 ಹುದ್ದೆಗಳು
- ಗ್ರಂಥಪಾಲಕ (Librarian)- 13 ಹುದ್ದೆಗಳು
ವಿದ್ಯಾರ್ಹತೆ:
- ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಪಾಸ್ ಮಾಡಿರಬೇಕು.
- ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, ITI ತೇರ್ಗಡೆ ಹೊಂದಿರಬೇಕು.
- ಕಿರಿಯ ಆರೋಗ್ಯ ನಿರೀಕ್ಷಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, PUC, ಡಿಪ್ಲೊಮಾ ಮಾಡಿರಬೇಕು.
- ಸಹಾಯಕ ಗ್ರಂಥಪಾಲಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ]ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್ ಮಾಡಿರಬೇಕು.
- ಕೈಗಾರಿಕಾ ವಿಸ್ತರಣಾ ಅಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ಅಥವಾ ವಾಣಿಜ್ಯ ಅಥವಾ ವ್ಯವಹಾರ ಆಡಳಿತದಲ್ಲಿ ಪದವಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
- ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಗ್ರಿ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷ, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳು ರೂ.50/-, Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.300/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ವೇತನ ವಿವರ: ಜೂನಿಯರ್ ಇಂಜಿನಿಯರ್ ರೂ.33450-62600/-, ನೀರು ಸರಬರಾಜುದಾರರು ರೂ.27650-52650/-, ಸಹಾಯಕ ನೀರು ಸರಬರಾಜುದಾರರು ರೂ.21400-42000/-, ಕಿರಿಯ ಆರೋಗ್ಯ ನಿರೀಕ್ಷಕರು ರೂ.23500-47650/-, ಸಹಾಯಕ ಗ್ರಂಥಪಾಲಕ ರೂ.30350-58250/-, ಕೈಗಾರಿಕಾ ವಿಸ್ತರಣಾಧಿಕಾರಿ ರೂ.33450-62600/-, ಗ್ರಂಥಪಾಲಕ ರೂ.37900-70850/ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗ್ರೂಪ್ ಸಿ (HK) with below degree qualification
ನೋಟಿಫಿಕೇಶನ್ ಗ್ರೂಪ್ ಸಿ (RPC) with degree qualification
ನೋಟಿಫಿಕೇಶನ್ ಗ್ರೂಪ್ ಸಿ (HK) with degree qualification
ನೋಟಿಫಿಕೇಶನ್ ಗ್ರೂಪ್ ಸಿ (RPC) with below degree qualification