KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 327 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಾಯಕ ಇಂಜಿನಿಯರ್, ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿ ಹುದ್ದೆ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 14-ಮೇ-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14-05-2024
HK ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 25-Aug-2024
RPC ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 11-Aug-2024
ಹುದ್ದೆಯ ಹೆಸರು:
ಸಹಾಯಕ ಇಂಜಿನಿಯರ್ (ಸಿವಿಲ್) – 100 ಹುದ್ದೆ
ಸಹಾಯಕ ಇಂಜಿನಿಯರ್ (ಸಿವಿಲ್) (WRD) – 90 ಹುದ್ದೆ
ಭೂ ದಾಖಲೆಗಳ ಸಹಾಯಕ ನಿರ್ದೇಶಕರು – 27 ಹುದ್ದೆ
ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ – 40 ಹುದ್ದೆ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರು – 23 ಹುದ್ದೆ
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) -10 ಹುದ್ದೆ
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 9 ಹುದ್ದೆ
ಬಾಯ್ಲರ್‌ಗಳ ಸಹಾಯಕ ನಿರ್ದೇಶಕರು -3 ಹುದ್ದೆ
ಭೂವಿಜ್ಞಾನಿ – 25 ಹುದ್ದೆ
ಒಟ್ಟು ಹುದ್ದೆ 327 ಹುದ್ದೆಗಳು
ವಿದ್ಯಾರ್ಹತೆ: ಹುದ್ದೆಗನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಅ
ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ 18 ವರ್ಷ ಕನಿಷ್ಠ, ಹಾಗೂ ಗರಿಷ್ಠ 35 ವರ್ಷ
CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷ, PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.150/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವೇತನ: ಸಹಾಯಕ ಇಂಜಿನಿಯರ್ (ಸಿವಿಲ್), ಸಹಾಯಕ ಇಂಜಿನಿಯರ್ (ಸಿವಿಲ್) (WRD), ಭೂ ದಾಖಲೆಗಳ ಸಹಾಯಕ ನಿರ್ದೇಶಕ, ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43100-83900/- ವೇತನವಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.45300-88300/- ಮಾಸಿಕ ವೇತನವಿರಲಿದೆ.
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್), ಕಾರ್ಖಾನೆಗಳ ಸಹಾಯಕ ನಿರ್ದೇಶಕರು, ಬಾಯ್ಲರ್ ಸಹಾಯಕ ನಿರ್ದೇಶಕ, ಭೂವಿಜ್ಞಾನಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.43100-83900/- ಮಾಸಿಕ ವೇತನವಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ