ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಿದೆ. ವಿವರಗಳು ಈ ಕೆಳಗಿನಂತಿವೆ,
ತಾತ್ಕಾಲಿಕ ಆಯ್ಕೆ ಪಟ್ಟಿಗಳ ಮಾಹಿತಿ :
2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 1 ಎಫ್‌ಡಿಎ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 5 ಕ್ಷೇತ್ರ ಸಹಾಯಕರು-ಹೆಚ್ ಕೆ ವೃಂದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. 2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪ ಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 79 ವಿಜ್ಙಾನ ಶಿಕ್ಷಕರು-ಉಳಿಕೆ ಮೂಲ ವೃಂದ (ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 21 ವಿಜ್ಞಾನ ಶಿಕ್ಷಕರು
ಹೈ.ಕ ವೃಂದ(ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಈ ಎಲ್ಲಾ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.