ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರುಗಳನ್ನು 2020-21 ನೇ ಸಾಲಿನಲ್ಲಿ ಗೌರವಧನದ ಆಧಾರದ ಮೇಲೆ ಜಿಲ್ಲಾ ಹಂತದಲ್ಲಿ ನಿಯಮಾವಳಿಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳು (ನಿರುದ್ಯೋಗಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನಿವೃತ್ತ ಶಿಕ್ಷಕರು/ಉಪನ್ಯಾಸಕರು) ಆಯಾ ಜಿಲ್ಲಾ ಕೇಂದ್ರಗಳಲ್ಲಿರುವ ಸಂಬಂಧಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನ/ವಸತಿ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಯು ಹಲವು ಜಿಲ್ಲೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಘದ ಅಧಿಕೃತ ವೆಬ್‌ಸೈಟ್ www.kries.kar.nic.in ಗೆ ಭೇಟಿ ನೀಡಬಹುದು.