ಕರ್ನಾಟಕ ರಾಜ್ಯ ಆಡಳಿತ ಮಂಡಳಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಗಮನಿಸಬೇಕಾದ ಅಂಶಗಳು
ಹುದ್ದೆಯ ಹೆಸರು
ಶೀಘ್ರಲಿಪಿಗಾರರಾಗಿ ಹುದ್ದೆಗೆ ಅರ್ಜಿ
ಹುದ್ದೆಯ ಸಂಖ್ಯೆ 13
ವಿದ್ಯಾರ್ಹತೆ -ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು.
ಇತರೆ ಅರ್ಹತೆಗಳು
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕದಂದು ಅರ್ಭರ್ಥಿಗೆ 18ವರ್ಷ ತುಂಬಿರಬೇಕು.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 150. ರೂ.ಶುಲ್ಕ ಪಾವತಿ ಮಾಡಬೇಕು.ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿ ಹೇಗೆ
ಅರ್ಜಿ ಶುಲ್ಕವನ್ನು ಐಪಿಒ / ಡಿಡಿ ಮೂಲಕ ವಿಲೇಖನಾಧಿಕಾರು, ಕರ್ನಾಟಕ ರಾಜ್ಯ ಆಡಳಿತ ನ್ಯಾತಮಂಡಳಿ, ಕಂದಾಯ ಭವನ, 7 ನೇ ಮಹಡಿ, ಕೆ.ಜಿ.ರಸ್ತೆ , ಬೆಂಗಳೂರು 560099 ಅರ್ಜಿಯೊಂದಿಗೆ ಲಗತ್ತಿಸಬೇಕು.
ವೇತನ
30350-58250 ರೂ.ನಿಗದಿಪಡಿಸಲಾಗಿದೆ.
ಹುದ್ದೆಗಳ ಭರ್ತಿ
ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/2/2021
ಅರ್ಜಿ ಸಲ್ಲಿಸುವ ವಿಳಾಸ
ವಿಲೇಖನಾಧಿಕಾರಿ, ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ,ಕಂದಾಯ ಭವನ,7 ನೇ ಮಹಡಿ,ಕೆಂಪೇಗೌಡ ರಸ್ತೆ ಬೆಂಗಳೂರು,560009. ಅರ್ಜಿಯನ್ನು ಅಂಚೆ ಅಥವಾ ಖುದ್ದಾಗಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿ ಪಡೆಯಲು ಭೇಟಿ ನೀಡಬೇಕಾದ ವೆಬ್ ವಿಳಾಸ: https://ksat.karnataka.gov.in/