KSET ಪರೀಕ್ಷಾ ದಿನಾಂಕ ನಿಗದಿ: ಅಧಿಕೃತ ಪ್ರಕಟಣೆ ಬಿಡುಗಡೆ

Advertisements

ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ) ಯನ್ನು ದಿನಾಂಕ : 11 ನೇ ಎಪ್ರಿಲ್ 2021 ರಂದು ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಆದ್ದರಿಂದ ಸದರಿ ಕೆಸೆಟ್ 2021 ಪರೀಕ್ಷೆಯನ್ನು 25-04-2021 (ಭಾನುವಾರ) ನಡೆಸಲು ತೀರ್ಮಾನಿಸಲಾಗಿದೆ.

ಕೆಸೆಟ್ 2021 ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ಕರ್ನಾಟಕ ಸರಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದಿದೆ.

Leave a Comment