KSFES Jobs: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 975 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

Advertisements

KSFES Recruitment 2024: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೈರ್‌ಮ್ಯಾನ್, ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಕರ್ನಾಟಕ ಸರಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಹಾಗಾಗಿ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.

ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES) ಇಲ್ಲಿ 975 ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ಅಧಿಸೂಚನೆ ಪ್ರಕಟಗೊಳ್ಳಲಿದೆ.
ಫೈರ್‌ಮ್ಯಾನ್, ಫೈರ್ ಇಂಜಿನ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.33450-62600/- ಪ್ರತಿ ತಿಂಗಳು ವೇತನ ದೊರಕಲಿದೆ.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ

ಹುದ್ದೆ ಸಂಖ್ಯೆ ಮತ್ತು ಹೆಸರು;
ಅಗ್ನಿಶಾಮಕ ಠಾಣಾಧಿಕಾರಿ – 64 ಹುದ್ದೆಗಳು
ಚಾಲಕ ತಂತ್ರಜ್ಞ – 27 ಹುದ್ದೆಗಳು
ಅಗ್ನಿಶಾಮಕ ಯಂತ್ರ ಚಾಲಕ – 153 ಹುದ್ದೆಗಳು
ಅಗ್ನಿಶಾಮಕ- 731 ಹುದ್ದೆಗಳು

ವಿದ್ಯಾರ್ಹತೆ: 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: 18 ರಿಂದ 28 ವರ್ಷದೊಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. OBC, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ರೂ.250/-, SC/ST ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.