KSOU ನಲ್ಲಿ ಉದ್ಯೋಗವಕಾಶ, 23 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇರ ಸಂದರ್ಶನ

Advertisements

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.

ಹುದ್ದೆಯ ಹೆಸರು : ಸಹಾಯಕ ಪ್ರಧ್ಯಾಪಕರು
ಹುದ್ದೆ ಸಂಖ್ಯೆ : 23
ಹುದ್ದೆಗಳ ವಿಧ : ತಾತ್ಕಾಲಿಕ ಗುತ್ತಿಗೆ ಆಧಾರಿತ ಹುದ್ದೆಯಾಗಿದೆ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ವಿವರ : ಇಂಗ್ಲೀಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಪುರಾತತ್ತ್ವ ಸಾರ್ವಜನಿಕ ಆಡಳಿತ, ಸಮಾಜ ಶಾಸ್ತ್ರ, ಮಾನವ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ, ಸೂಕ್ಷ್ಮ ಜೀವಾಣು ಶಾಸ್ತ್ರ,ಬಯೋಟೆಕ್ನಾಲಜಿ ಮತ್ತು ಪ್ರಾಣಿ ಶಾಸ್ತ್ರ,ರಸಾಯನ ಶಾಸ್ತ್ರ,ಬಯೋಕೆಮಿಸ್ಟ್ರಿ,ಮನೋವಿಜ್ಞಾನ, ಪರಿಸರ ವಿಜ್ಞಾನ, ಆಹಾರ ವಿಜ್ಞಾನ, ಭೂಗೋಳ ಶಾಸ್ತ್ರ,ಗಣಕಯಂತ್ರ ವಿಜ್ಞಾನ, ಮಾಹಿತಿ ತಂತ್ರಜ್ಞಾನ,ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಗಣಿತ ಶಾಸ್ತ್ರ ಸಸ್ಯ ಶಾಸ್ತ್ರ

ಅಭ್ಯರ್ಥಿಗಳು ನಿಗದಿತ ನಮೂನೆಯ ಐದು ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗತಕ್ಕದ್ದು.
ಸಂದರ್ಶನದ ದಿನಾಂಕ : 10-08-2021 ರಿಂದ 13-08-2021 ರವರೆಗೆ

ನಿರ್ದಿಷ್ಟ ಸಮಯ ಹಾಗೂ ಸ್ಥಳವನ್ನು ದಿನಾಂಕ 09-08-2021 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿಷಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುತ್ತಾರೋ ಆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಎನ್ ಇಟಿ/ಕೆಎಸ್ ಇಟಿ/ಪಿಹೆಚ್‌ಡಿ ಯಾವುದಾದರೂ ಒಂದು ಅರ್ಹತೆಯನ್ನು ಹೊಂದಿರಬೇಕು.ಹಾಗೂ ಯುಜಿಸಿ 2018ಮಾರ್ಗಸೂಚಿ ಅನುಸಾರ ಇತರೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಒಂದಕ್ಕಿಂತ ಹೆಚ್ಚಿನ ವಿಷಯಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದ್ದಲ್ಲಿ, ಪ್ರತಿಯೊಂದು ವಿಷಯಕ್ಕೆ ಪ್ರತ್ಯೇಕ ವಾಗಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಾಡಿ

ಅಪ್ಲಿಕೇಶನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Comment