ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಯ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ 22.06.2021 ಸಂಜೆ 06.00 ಗಂಟೆಯವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 24.06.2021 ಕ್ಕೆ ನಿಗದಿಪಡಿಸಲಾಗಿತ್ತು.
ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲು ತೀರ್ಮಾನಿಸಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 22-06-2021 ರಿಂದ 07-07-2021 ರವರೆಗೆ ವಿಸ್ತರಿಸಲಾಗಿದೆ.
ಅಧಿಸೂಚನೆ ದಿನಾಂಕ : 03.03.2021 ರಲ್ಲಿ ಈಗಾಗಲೇ ನಿಗದಿಪಡಿಸಿರುವಂತೆ ದಿನಾಂಕ 03.05.2021 ನ್ನೇ ವಯೋಮಿತಿಯ ಕೊನೆಯ ದಿನಾಂಕವನ್ನಾಗಿ ಪರಿಗಣಿಸಲಾಗುವುದು. ಆದರೆ ಜಾತಿ ಮತ್ತು ಆದಾಯ ಮೀಸಲಾತಿ ಹಾಗೂ ಇತರೆ ದಾಖಲೆಗಳಿಗೆ ವಿಸ್ತರಿಸಿದ ದಿನಾಂಕವಾದ 07.07.2021 ನ್ನು ಕೊನೆಯ ದಿನಾಂಕವಾಗಿ ಪರಿಗಣಿಸಲಾಗುವುದು. ಉಳಿದಂತೆ ಸದರಿ ಅಧಿಸೂಚನೆಯಲ್ಲಿ ನೀಡಲಾಗಿರುವ ಇತರೆ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.
ಸರ್, karnatakabest.com ಸ್ವಂತ ವೆಬ್ ಸೈಟ್ ನಡೆಸುವವರಿಗೂ ಹಾಗೂ ಕಲಿಯಬಯಸುವವರಿಗೂ ಅಗತ್ಯ ವಿಷಯಗಳನ್ನು ಕಾಲಕಾಲಕ್ಕೆ ತಿಳಿಸುತ್ತ ಬಂದಿದೆ. ಅಲ್ಲದೇ ನಿಮ್ಮಿಂದ ನಮಗೆಲ್ಲ ಹಲವಾರು ಉಪಯುಕ್ತ ಜ್ನಾನ ದೊರೆತಿದೆ. ತಮ್ಮ ವೆಬ್ ಸೈಟ್ ನಮ್ಮಂತವರಿಗೆ ಸಹಾಯ ಮಾಡುತ್ತ ಹೀಗೆಯೇ ಯಶಸ್ವಿಯಾಗಿ ಸಾಗಲಿ ಎಂದು ಆಶಿಸುತ್ತೇನೆ.
ಧನ್ಯವಾದಗಳು ಸರ್…
ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದ. [email protected] ಗೆ ನಿಮ್ಮ ವಾಟ್ಸಪ್ ಸಂಖ್ಯೆ ಕಳುಹಿಸಿ.