ಕೆ.ಎ.ಆರ್.ಪಿ ಮೌಂಟೆಡ್ ಮೈಸೂರು ಇಲ್ಲಿ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆಗಳಿಗೆ ನೇಮಕಾತಿಗಾಗಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು ಲಿಪಿಕ ವೃಂದ ಸೇರಿದಂತೆ (ನೇಮಕಾತಿ) ನಿಯಮಗಳು 2004 ರ ಹಾಗೂ ಸರಕಾರದ ಅಧಿಸೂಚನೆ ಅನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-06-2021 ಬೆಳಗ್ಗೆ 10 ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-06-2021 ಸಂಜೆ 5.00 ಗಂಟೆಯವರೆಗೆ
ಹುದ್ದೆ : ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆ
ಹುದ್ದೆಗಳ ಸಂಖ್ಯೆ :17
ಹುದ್ದೆ ಸ್ಥಳ : ಕರ್ನಾಟಕ
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500/- ರಿಂದ ರೂ.47, 650/- ವೇತನ ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೂ 30 ವರ್ಷಗಳನ್ನು ಮೀರಿರಬಾರದು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2( ಎ), 2 ( ಬಿ) , 3 ( ಎ) , 3 ( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ,ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
ಅರ್ಜಿಗಳನ್ನು ಕಮಾಂಡೆಂಟ್ , ಕೆ.ಆರ್.ಪಿ ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು – 570011 ರವರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗೆ ಕಚೇರಿಗೆ ತಲುಪುವಂತೆ ತಲುಪಿಸುವುದು.
ನಿಗದಿತ ಶುಲ್ಕಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕೃತ ಶಾಖೆಯಿಂದ ಡಿಡಿಯನ್ನು ” ಕಮಾಂಡೆಂಟ್, ಕೆಎಆರ್ ಪಿ, ಮೌಂಟೆಡ್ ಕಂಪನಿ, ಮೈಸೂರು ರವರ ಹೆಸರಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.
ನಿಗದಿತ ಮಾಹಿತಿ/ ಸೂಚನೆಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪ್ರಕಟಿಸಲಾಗಿದೆ.
ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ತಮ್ನ ವೈಯಕ್ತಿಕ ಖರ್ಚಿನಲ್ಲಿ ಬೆರಳಚ್ಚು ಮಾಡಿಸಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆತ ಬಣ್ಣದ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿಯಲ್ಲಿರುವ ಎಲ್ಲಾ ವಿವರಗಳನ್ನು ಸಮರ್ಪಕವಾಗಿ ಭರ್ತಿ ಮಾಡಿ ಕೆ.ಎ. ಆರ್.ಪಿ ಮೌಂಟೆಡ್ ಕಂಪನಿ ಮೈಸೂರು ಇವರಿಗೆ ಸಲ್ಲಿಸುವುದು.
ನೋಟಿಫಿಕೇಶನ್