KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮೇ 2021 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ : 22 ಎಪ್ರಿಲ್2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2021

ಹುದ್ದೆ : ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ : 4000

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ರಿಂದ ರೂ.47,650/- ವರೆಗೆ ವೇತನವಿರುತ್ತದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು 10th ಹಾಗೂ 12th ನ್ನು ತೇರ್ಗಡೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಒಬಿಸಿ, 2A, 2B, 3A ಹಾಗೂ 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜನರಲ್ ಅಭ್ಯರ್ಥಿಗಳಿಗೆ ರೂ.250, 2A,2B, 3A ಹಾಗೂ 3B ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಇಟಿ, ಪಿಎಸ್‌ಟಿ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ 2
KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ 3

Leave a Comment