402 ಕೆಎಸ್‌ಪಿ ಸಿವಿಲ್ ಪಿಎಸ್‌ಐ ಹುದ್ದೆಗೆ ಅರ್ಜಿ ಆಹ್ವಾನ

Advertisements

ಕರ್ನಾಟಕ ಸ್ಟೇಟ್ ಪೊಲೀಸ್(ಕೆಎಸ್ ಪಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03 ಮೇ , 2021ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-04-2021(10am)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-05-2021(6pm)
ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 05-05-2021

ಕೆಎಸ್ ಪಿ ನಲ್ಲಿ ಒಟ್ಟಿ 402 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಿವಿಲ್ ಪಿಎಸ್ ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ವೇತನ : ರೂ.37,900/-ರಿಂದ ರೂ.70,850 ನಿಗದಿಪಡಿಸಲಾಗಿದೆ.

ಕೆಎಸ್ ಪಿ ಯು ಸಿವಿಲ್ ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಸಕ್ತ ಅಭ್ಯರ್ಥಿಗಳಿಂದ ಆಹ್ವಾನಿಸಿದೆ.

ಕೆಎಸ್ ಪಿ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಜನರಲ್ ಅಭ್ಯರ್ಥಿಗಳಿಗೆ ರೂ.500/-,2A,2B,3A ಹಾಗೂ 3B , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆ, ಇಟಿ ಟೆಸ್ಟ್, ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಸಿವಿಲ್ ಪಿಎಸ್ ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ,OBC, 2A, 2B, 3A and 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಡಿಗ್ರಿಯನ್ನು ಪಡೆದಿರಬೇಕು.

ಅಭ್ಯರ್ಥಿಗಳು ಕೆಎಸ್ ಪಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment